ಸೋಮವಾರಪೇಟೆಯಲ್ಲಿ 10ಕ್ಕೂ ಹೆಚ್ಚು ಬೋರ್ ವೆಲ್ ಗಳಲ್ಲಿ ನೀರು ಬತ್ತಿ ಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ತೋಟಗಳಿಗೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಒಂದು ತೊಂಬೆಯನ್ನು ಸರಿಪಡಿಸಲಾಗಿದ್ದು ಜನರಿಗೆ ನೀರು ಪೂರೈಸಲಾಗುತ್ತಿದೆ ಉಳಿದಂತೆ ಕೆಲವು ಬೀದಿಗಳಿಗೆ ನೀರು ಲಭ್ಯವಿಲ್ಲದೆ ತೊಂದರೆ ಪಡುತ್ತಿದ್ದಾರೆ ಅಲ್ಲದೆ ಕಾವೇರಿ ನೀರು ಕೂಡ ಸಿಗುತ್ತಿಲ್ಲ ಈ ಸಂಬಂಧ ಅನೇಕ ಬಾರಿ ನಗರಸಭಾ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ, ಹೀಗಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಿ ಕುಡಿಯುವ ನೀರನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ.