ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಅಮಗಾಂವ ಎನ್ನುವ ಗ್ರಾಮ ಭೀಮಗಡ ಅಭಯಾರಣ್ಯದಲ್ಲಿ ಇರುವುದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದ್ದು ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ,ಮಕ್ಕಳಿಗೆ ಸರಿಯಾಗಿ ಶಿಕ್ಷಣ ಸಿಗುತ್ತಿಲ್ಲಾ ಆದ್ದರಿಂದ ನಮ್ಮನ್ನ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡುವಂತರ ಇಂದು ಮಂಗಳವಾರ 12 ಗಂಟೆಗೆ ಅಮಗಾಂವ ಗ್ರಾಮಸ್ಥರಿಂದ ಮನವಿ ಸಲ್ಲಿಸಿದರು ಪ್ರತಿ ವರ್ಷವೂ ಕೂಡಾ ನಾವು ಅನೇಕ ಸಮಸ್ಯೆ ಎದುರಿಸುತ್ತಿದ್ದು ಆದ್ದರಿಂದ ಸರ್ಕಾರ ಮತ್ತು ಜಿಲ್ಲಾಡಳಿತ ನಮ್ಮನ್ನ ಕಾಡಿನಿಂದ ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಹಾಗೇಯೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ನಮ್ಮ ಜೊತೆ ಇರಬೇಕು ಎಂದು ಆಗ್ರಹಿಸಿದರು.