ಶಿಕಾರಿಪುರದ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಎನ್.ವಿ. ಈರೇಶ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶುಕ್ರವಾರ ಸಂಜೆ 5 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಇವರೊಂದಿಗೆ ನೂರಾರು ಬೆಂಬಲಿಗರು ಸಹ ಪಕ್ಷಕ್ಕೆ ಸೇರ್ಪಡೆಯಾದರು. ಎನ್.ವಿ. ಈರೇಶ್‌ರವರೊಂದಿಗೆ ಬಳ್ಳಿಗಾವಿ ಶಿವಕುಮಾರ್, ಹಾಲೇಶಪ್ಪ, ತಾಳಗುಂದ ರಾಜಪ್ಪ, ಸೇರಿದಂತೆ ಹಲವು ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಮಹಿಳಾ ಮುಖಂಡರಾದ ಪುಷ್ಪಾ ಪಿ.ಓ. ಶಿವಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.