ವಿಜಯಪುರ ನಗರದ ಗೋಲಗುಮ್ಮಟ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಮಧ್ಯಾನ 2 ಗಂಟೆ ಸುಮಾರಿಗೆ ಪೊಲೀಸ್ ಅಧಿಕಾರಿಗಳಿಂದ ರೌಡಿಶೀಟರ್ ಪರೇಡ್ ನಡೆಸಿದರು. ಗಣೇಶ ಹಬ್ಬದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರೌಡಿಶೀಟರ್ ಗಳ ಪರೆಡ್ ನಡಿಸಿ ಪೊಲೀಸ್ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದರು. ರೌಡಿಶೀಟರ್ ಗಳು ಏನಾದರೂ ಬಾಲ ಬಿಚ್ಚಿದರೆ ಬಾಲ ಕಟ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು. ರೌಡಿಶೀಟರ್ ಗಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.