ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದಿಂದ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಖಾಸಗಿ ಸಹಭಾಗಿತ್ವ ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಇದರಿಂದ ಖಾಸಗಿಯವರಿಗೆ ಅನುಕೂಲವಾಗುತ್ತದೆ ಕೂಡಲೇ ಈ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.