ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ಸಂಭ್ರಮದಿಂದ ಆಯುಧಪೂಜೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯುಧಪೂಜೆಯ ಮುನ್ನಾದಿನವಾದ ಮಂಗಳವಾರ ಮಾರುಕಟ್ಟೆಯಲ್ಲಿ ಬಾಳೆಗಿಡ ಹಣ್ಣು ಹೂಗಳ ಖರೀದಿ ಭರಾಟೆ ಜೋರಾಗಿತ್ತು. ದರ ಏರಕೆಯ ಮಧ್ಯದಲ್ಲಿ ಸಹ ಜನರು ಹಣ್ಣು ಹೂ ಕುಂಬಳಕಾಯಿ ಸೇರಿದಂತೆ ವಿವಿಧ ವಸ್ತುಗಳನ್ನು ಖರೀದಿ ಮಾಡಿದರು.