ಹರಿಹರ: ಮಾಜಿ ಶಾಸಕ ಎಸ್.ರಾಮಪ್ಪರನ್ನು ರಾಜಕೀಯವಾಗಿ ಮುಗಿಸಲು ಆರ್‌ಎಸ್‌ಎಸ್ ಮನಸ್ಥಿತಿ ಹೊಂದಿ ಕಾಂಗ್ರೆಸ್ಸಿನ ಮುಖವಾಡ ಹಾಕಿರುವ ಕಾಂಗ್ರೆಸ್ ಪಕ್ಷದ ಕೆಲವರ ಷಡ್ಯಂತ್ರ ಫಲಿಸುವುದಿಲ್ಲ ಎಂದು ಪಕ್ಷದ ಮುಖಂಡ ಬಿ.ಮಗ್ದುಮ್ ಹೇಳಿದರು. ಮುಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆಂಬ ಸುಳ್ಳು ಆರೋಪ ಹೊರಿಸಿ ಕಟ್ಟಾ ಕಾಂಗ್ರೆಸ್ಸಿಗ ರಾಮಪ್ಪರನ್ನು ಪಕ್ಷದಿಂದ ಉಚ್ಚಾಟಿಸಿ ಎನ್ನುವುದು ಪಕ್ಷಕ್ಕೆ ಮಾಡುವ ದ್ರೋಹವಾಗಿದೆ ಎಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಪತ್ರಿಕಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಬಿರ್ಲಾಕಂಪನಿಯಲ್ಲಿ ಸಾಮಾನ್ಯ ಕಾರ್ಮಿಕರಾಗಿದ್ದ ರಾಮಪ್ಪನವರು ಶಾಸಕರಾಗಿ ಆಯ್ಕೆಯಾಗಿದ್ದು ಅವರ ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ ಎಂದರು