ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದು ಎಂದು ಪುರಸಭೆ ಅಧ್ಯಕ್ಷ ದಿಲೀಪಕುಮಾರ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ಮಧ್ಯಾಹ್ನ 2:30ಕ್ಕೆ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಸಹ ಮಾತನಾಡಿದರು. ಪುರಸಭೆ ಮುಖ್ಯ ಅಧಿಕಾರಿ ಹುಸಮುದ್ದಿನ್ ಬಾಬಾ ಸೇರಿದಂತೆ ಪುರಸಭೆಯ ಇಡೀ ಸಿಬ್ಬಂದಿ ಹಾಗೂ ಸಮಸ್ತ ಕಾರ್ಮಿಕರನ್ನು ಸನ್ಮಾನಿಸಲಾಯಿತು.