ಟ್ರ್ಯಾಕ್ಟರ್ ವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ನಡೆದಿದೆ. ತರೀಕೆರೆಯ ಮಾವಿನಕೆರೆಯ ನಿವಾಸಿ ಧರ್ಮ (48) ಅಂತರಗಂಗೆಯಲ್ಲಿರುವ ತೋಟಕ್ಕೆ ನಡೆದುಕೊಂಡು ಹೋಗುವಾಗ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವುಕಂಡಿದ್ದಾರೆ. ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿ ಹೊಡೆದಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.