ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ 33 ವರ್ಷದ ಹಿಂದೆ ನಿರ್ಮಾಣಗೊಂಡಿರುವ ತಹಶೀಲ್ದಾರ್ ಕಾರ್ಯಲಯವನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರು ಖುದ್ದಾಗಿ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಶೀತಲಗೊಂಡಿರುವ ಕಟ್ಟಡವನ್ನು ಪುನಶ್ಚೇತನ ಮಾಡಬೇಕೆಂದು ಸಂಬಂಧ ಪಟ್ಟ ಅಧಿಕಾರಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಆಡಳಿತ ಅಧಿಕಾರಿ ಕರೆಪ್ಪ ಬೆಳ್ಳಿ, ಪುರಸಭೆ ಅಧ್ಯಕ್ಷರಾದ ಡಾ.ಶಾಂತವೀರ ಮನಗೂಳಿ ಸೇರಿದಂತೆ ಹಲವರಿದ್ದರು..