ಬಡ ಮಕ್ಕಳಿಗೆ ಕ್ರೀಡೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯ ನೇಮಕಾತಿಯಲ್ಲಿ ಹೆಚ್ಚಿನ ಮೀಸಲಾತಿಯನ್ನು ನೀಡಬೇಕೆಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಹೇಳಿದರು. ಸೋಮವಾರ ಸಂಜೆ 4 ಗಂಟೆಗೆ ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯ ಪ್ರಾಮುಖ್ಯತೆಯು ಇದೆ, ಜೊತೆಗೆ ಹೆಚ್ಚಿನ ಶಿಕ್ಷಣದ ಅವಶ್ಯಕತೆ ಇದೆನೀ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಾಯಧನ ಬಿಡುಗಡೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿ ಪ್ರಯತ್ನ ಮಾಡಲಾಗುತ್ತದೆ ಎಂದರು.