ಸೆಪ್ಟೆಂಬರ್ 4, ಗುರುವಾರ ಮಧ್ಯಾಹ್ನ 2 ಗಂಟೆಗೆ ಕಂಪ್ಲಿ ಪಟ್ಟಣದ ಐತಿಹಾಸಿಕ ಶ್ರೀ ಸೊಮಪ್ಪ ದೇವಸ್ಥಾನದ ಆವರಣದಲ್ಲಿ ವೀರ ಕಂಪಲಿರಾಯ ವಿನಾಯಕ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಭಕ್ತರಿಗಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಭಕ್ತರು ಹಾಗೂ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆ ಹಾಗೂ ಅನ್ನಪ್ರಸಾದ ಸ್ವೀಕರಿಸಿದರು.