ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಭೀಮಾನದಿ ಸೇತುವೆಯು ಸಂಪೂರ್ಣ ಶಿಥಿಲಗೊಂಡಿದ್ದು, ಸೇತುವೆ ಮೇಲೆ ತಗ್ಗು ದಿನ್ನಿಗಳು ಬಿದ್ದ ಪರಿಣಾಮ ವಾಹನ ಸವಾರರು ಪರದಾಡುತ್ತಿದ್ದಾರೆ, ಹೀಗಾಗಿ ಕೂಡಲೇ ನೂತನ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ಗ್ರಾಮಸ್ಥರು ಮಾಧ್ಯಮ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. ಸೇತುವೆಯು ಸುಮಾರು 60 ವರ್ಷಗಳ ಹಳೆಯದಾಗಿದ್ದು ಯಾವ ಸಂದರ್ಭದಲ್ಲಿ ಏನಾದರೂ ಅನಾಹುತ ಸಂಭವಿಸುತ್ತದೆ. ಹೀಗಾಗಿ ಕೂಡಲೇ ನೂತನ ಸೇತುವೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.