ರಕ್ತದಾನ ಮಾಡುವುದರಿಂದ ಹೃದಯಾಘಾತವನ್ನು ಶೇ. 80ಕ್ಕಿಂತ ಜಾಸ್ತಿ ತಡೆಯಲು ಸಹಾಯವಾಗುತ್ತದೆ.ರಕ್ತದ ಒತ್ತಡ, ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ ಎಂದು ಕರ್ನಾಟಕ ರೈತ ಜನಸೇನೆ ತಾಲ್ಲೂಕು ಅಧ್ಯಕ್ಷ ನೇತಾಜಿ ಸರ್ಕಲ್ ಮಂಜುನಾಥ್ ತಿಳಿಸಿದ್ದಾರೆ.ಪಟ್ಟಣದ ಡಿ ವಿ ಜಿ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾಗ್ಯನಗರ ಭಿಮಾನಿಗಳಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಯುವಕರಿಗೆ ಪ್ರಮಾಣ ಪತ್ರ ವಿತರಸಿ ಮಾತನಾಡಿದ ಅವರು ಯಾವುದೇ ಭೇದ ಭಾವ ಇಲ್ಲದೆ ಹೆಣ್ಣು ಗಂಡೆಂಬ ಭೇದವಿಲ್ಲದೆ 18 ರಿಂ