ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಚಾಕು ಇರಿತ ಮಾಡಲಾಗಿದೆ. ಗ್ರಾಮದ ಉರ್ದು ಪ್ರೌಢ ಶಾಲೆಯ 9ನೇ ತರಬೇತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಆರೋಪಿ ಪರಾರಿಯಾಗಿದ್ದು, ಸ್ಥಳಕ್ಕೆ ತಡಸ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. ಗಾಯಾಳು ಬಾಲಕಿಯನ್ನು ತಡಸ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.