ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಯರ್ರಿಸ್ವಾಮಿ ಅವರು ಐದು, ಏಳು, ಒಂಭತ್ತು ಮತ್ತು ಹನ್ನೊಂದನೇ ದಿನಗಳಂದು ಗಣಪತಿ ವಿಸರ್ಜನೆಯ ಮುಂಜಾಗ್ರತಾ ಕ್ರಮಗಳ ಪಾಲನೆ ಕುರಿತು ಆಗಸ್ಟ್ 30 ರ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಗಣಪತಿ ಮಂಡಳಿಗಳ ಮುಖಂಡರ ಜೊತೆ ಸಭೆ ನಡೆಸಿದರು. ಗಣಪತಿ ವಿಸರ್ಜನೆ ಪ್ರಯುಕ್ತ ಮೆರವಣಿಗೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ನಡೆಸಬೇಕು. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಆಸ್ಪದವಿರುವುದಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗದಂತೆ ಹಬ್ಬವನ್ನು ಆಚರಿಸುವಂತೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಗಣೇಶ ಪ್ರತಿಷ್ಠಾಪನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.