ರಾಷ್ಟ್ರೀಯ ಆರೋಗ್ಯ ಅಭಿಯಾನ-ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಆನಂದ ಸೂಚನೆ ನೀಡಿದ್ದಾರೆ. ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಸೂಚಿಸಿದರು.