ದೊಡ್ಡ ಮಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಆವರಣದಲ್ಲಿ ಗುರುವಾರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನಾಗಿ ಜೆಡಿಎಸ್ ತಾಲೂಕು ಅಧ್ಯಕ್ಷ ಜಯಮುತ್ತು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಜಯರಾಮು ಸೇರಿದಂತೆ ಜೆಡಿಎಸ್ ನ ಮುಖಂಡರು ಅಭಿನಂದಿಸಿದರು.