ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯಗಳಿಂದ ನದಿಗೆ ನೀರು ಹರಿಬಿಟ್ಟಿರುವುದರಿಂದ ಕೊಳ್ಳೇಗಾಲ ತಾಲೂಕಿನ ಸುಪ್ರಸಿದ್ಧ ಭರಚುಕ್ಕಿ ಜಲಪಾತಕ್ಕೆ ಜೀವಕಳೆ ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕೇರಳದ ವಯನಾಡು ಸಹಿತ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಕೂಡ ಭರಚುಕ್ಕಿ ಜಲಪಾತ ಮೈದುಂಬಿಕೊಳ್ಳಲು ಕಾರಣವಾಗಿದೆ. ಕಾನನದ ನಡುವೆ ಹಾಲ್ನೊರೆಯಂತೆ ಭೋರ್ಗರೆಯುತ್ತ ಧುಮ್ಮಿಕ್ಕುವ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದೆ.