ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ರಾಷ್ಟೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಸಾಧಕ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿಯ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಕ್ರೀಡಾ ಪಟುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕ್ರೀಡಾ ಸಾಧಕರು ಉಪಸ್ಥಿತರಿದ್ದರು.