ಸಾಗರ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಬೇಕು ಹಾಗೂ ಬೀದಿ ನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸಾಗರ ನಗರಸಭೆಯಿಂದ ಪರಿಹಾರ ನೀಡುವಂತೆ ಒತ್ತಾಯಿಸಿ ಮಂಗಳವಾರ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಅವರ ನೇತೃತ್ವದಲ್ಲಿ ಸಾಗರ ನಗರಸಭೆ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆಯನ್ನು ನಡೆಸಲಾಯಿತು.