ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸಂಜೆ 4ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಅವರು ಸಿದ್ದಾಪುರ ತಾಲೂಕು ಹಾಗೂ ಬನವಾಸಿಯನ್ನು ಸೇರ್ಪಡಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆ ಇದೆ. ಆದರೂ ಪ್ರಯತ್ನ ಮುಂದುವರೆದರೆ ಪಕ್ಷಾತೀತ ಹೋರಾಟ ನಡೆಸುತ್ತೇವೆ ಎಂದು ಕದಂಬ ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಎಚ್ಚರಿಸಿದರು.