ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗೂಳೂರು ಹೋಬಳಿ ಮಟ್ಟದ 2025 - 26 ನೇ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಗುರುವಾರ ಮದ್ಯಾನ 2 ಗಂಟೆಯ ಸಂದರ್ಭದಲ್ಲಿ ಶಾಸಕ ಸುರೇಶ್ ಗೌಡ ಅವರು ಗೂಳಹರವೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಶಟಲ್ ಆಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದಾರೆ ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯವನ್ನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ನೀಡಿದ್ದಾರೆ ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ಶಿಕ್ಷಕರು ಸ್ಥಳಿಯ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು