ಆಗಸ್ಟ್ 27, ಬುಧವಾರ ಮಧ್ಯಾಹ್ನ 12 ಗಂಟೆಗೆ ಕಂಪ್ಲಿ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರು ಧಾರ್ಮಿಕ ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಗಣೇಶನಿಗೆ ಮಹಾ ಮಂಗಳಾರತಿ ಸಲ್ಲಿಸಿದರು. ಪ್ರತಿವರ್ಷವೂ ಹೀಗೆ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಲಾಗಿದೆ.