ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾ ಭವನದಲ್ಲಿ ತಾಂತ್ರಿಕ ಸಮ್ಮೇಳನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಹಾಗೂ ಪಶು ವೈದ್ಯಕೀಯ ಪರೀಕ್ಷಕರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಎನ್.ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ್ದುಮುಂಬರುವ ದಿನಗಳಲ್ಲಿ ಗ್ರಾ.ಪಂ.ಸಹಯೋಗದೊಂದಿಗೆ ಬೀದಿ ಬದಿಯ ನಾಯಿಗಳಿಗೆ ಲಸಿಕೆಯನ್ನು ಹಾಕಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.