ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಮಧುಗಿರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಶುಕ್ರವಾರ ಮಧ್ಯಾಹ್ನ 4 ಗಂಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ “ಧರ್ಮಸ್ಥಳವು 800ಕ್ಕೂ ಹೆಚ್ಚು ವರ್ಷಗಳ ಪವಿತ್ರ ಇತಿಹಾಸ ಹೊಂದಿದೆ. ಇದರ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಷ್ಟೇ ದೊಡ್ಡವರಿರಲಿ ಕಾನೂನಿನ ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ,” ಎಂದು ಹೇಳಿದರು. ಅವರು ಮುಂದುವರೆದು, “ಎಸ್‌ಐಟಿ ಸರ್ಕಾರದ ಆದೇಶದಿಂದಲ್ಲ, ಕೋರ್ಟ್ ನಿರ್ದೇಶನದಂತೆ ರಚನೆಯಾಗಿದೆ. ಅದು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಧರ್ಮಾಧಿಕಾರಿಗಳು ಸಹ ಇದನ್ನು ಸ್ವಾಗತಿಸಿದ್ದಾರೆ. ಸತ್ಯ ಹೊರಬರಬೇಕು, ಅಪಪ್ರಚಾರಕ್ಕೆ ಕ