ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕದಡುವಂತಹ ಪ್ರಯೋಗಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯ `ಕೋಮು ಹಿಂಸೆ ನಿಗ್ರಹ ಪಡೆ' ಆರಂಭಿಸುವಂತೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೋಮು ಪ್ರಯೋಗಗಳು ನಡೆಯುತ್ತಿವೆ. ಬಿಜೆಪಿ ಪಕ್ಷ ಸಂಘ ಪರಿವಾರ ಹಾಗೂ ಹಿಂದು ಸಂಘಟನೆಗಳ ಒಟ್ಟುಗೂಡಿಸಿ ಕೋಮು ವಿಷಬೀಜ ಬಿತ್ತಿ ಜಿಲ್ಲೆಯಲ್ಲಿ ನೆಲೆ ನಿಲ್ಲುವ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ಸರಕಾರ ಈಗಲೇ ಕಠಿಣ ಕ್ರಮ ಕೈಗೊಂಡು ಪೂರ್ವವಿರಾಮ ಹಾಕಬೇಕಿದೆ ಎಂದರು. ಮದ್ದೂರು ಕಲ್ಲು ತೂರಾಟ ಪ್ರಕರಣ ನಡೆದಿರುವುದು ಖಂಡನಾರ್ಹ. ತಪ್ಪಿತಸ್ಥರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.