ಶಿಕ್ಷಣದ ಮಹತ್ವ ಸಾರಿದ ಕಾರಣಕ್ಕೆ ರಾಧಾಕೃಷ್ಣನ್ ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.ಪಟ್ಟಣದ ಗುರು ಭವನದಲ್ಲಿ ಹಮ್ಮಿಕೊಂಡಿದ್ದ ‘ಶಿಕ್ಷಕ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರ ಬದುಕು, ಯಶಸ್ಸು, ಸಾಧನೆಯ ಕಾರಣಕ್ಕೆ ಸ್ಮರಿಸುವ ಶಿಕ್ಷಕ ವೃತ್ತಿ ಸರ್ವಕಾಲಕ್ಕೂ ಶ್ರೇಷ್ಟವಾದುದು ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಭಾಗಿಯಾಗಿ ಗುಂಡು ಎಸೆತ ಮತ್ತು ಡಿಸ್ಕಸ್ ಥ್ರೋ ನಲ್ಲಿ ಪ್ರಥಮ ಸ್ಥಾನ ಬಂದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಚಂದ್ರಕುಮಾರ್ ಅವರನ್ನು ಶಾಸಕರು ಸನ್ಮಾನಿಸಿದರು.