ಇದೇ ಸಪ್ಟೆಂಬರ್ 13ನೇ ತಾರಿಕು ಬೆಂಗಳೂರಿನಲ್ಲಿ ಲೋಕ ಜನಶಕ್ತಿ ಪಕ್ಷದ ರಾಜ್ಯಮಟ್ಟದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕ ಜನಶಕ್ತಿ ಪಕ್ಷದ ಜಿಲ್ಲಾ ಅಧ್ಯಕ್ಷ ಜಿ ಗೋಪಾಲ ರೆಡ್ಡಿ ತಿಳಿಸಿದರು. ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮದ್ಯಾನ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಅಧ್ಯಕ್ಷರ ಸೂಚನೆ ಮೇರೆಗೆ ಕರ್ನಾಟಕದ 30 ಜಿಲ್ಲೆಗಳಲ್ಲಿ ಅಧ್ಯಕ್ಷರು ಮತ್ತು ತಾಲೂಕ ಮಟ್ಟದ ಪ್ರಮುಖ ಕಾರ್ಯಕರ್ತರ ಸಭೆ ಆಯೋಜಿಸಲಾಗಿದ್ದು ರಾಯಚೂರು ಜಿಲ್ಲೆಯಿಂದ ಎಲ್ಲ ತಾಲೂಕಿನ ಲೋಕ ಜನಶಕ್ತಿ ಪಕ್ಷದ ಮುಖಂಡರು ಹಾಗೂ ಪ್ರಮುಖರು ಭಾಗವಹಿಸುವಂತೆ ತಿಳಿಸಿದರು.