ಸೀಬರ್ಡ್ ನೌಕಾನೆಲೆಯಲ್ಲಿ ಮೆಷಿನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಶಿವಶಂಕರ್ ಹೊಸಮನಿ (36) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಬುಧವಾರ ಸಂಜೆ 7ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಶಿವಶಂಕರ್ ಹೊಸಮನಿ ಅವರು ಕಾರವಾರದ ಅಮದಳ್ಳಿ ಸಮೀಪದ ಮುದಗಾದಲ್ಲಿ ವಾಸವಾಗಿದ್ದರು. ಕಾರವಾರ ಬಸ್ ನಿಲ್ದಾಣದ ಬಳಿ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಮೃತರ ಪತ್ನಿ ಸ್ವಾತಿ ಹೊಸಮನಿ ಅವರು ಕಾರವಾರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಾಗಿದೆ.