ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರನ್ನು ಅಮಾನತ್ತಿನಲ್ಲಿರಿಸಿ ಸರ್ಕಾರವು ತನಿಖಾ ಆಯೋಗ ನೇಮಿಸುವ ತುರ್ತಿದೆ ಎಂದು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯ ಪಟ್ಟದ್ದಾರೆ. ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಕನ್ನಡ ನಾಡು-ನುಡಿ ಜಾಗೃತಿ ಸಮಿತಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ಹೋರಾಟ ಕನ್ನಡಿಗರ ಜಾಗೃತಿ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತನಿಖೆಯಲ್ಲಿ ಕಳಂಕ ರಹಿತ ಎಂದು ಸಾಬೀತಾದರೆ ವಜಾ ಮಾಡಿ. ಇಲ್ಲವಾದರೆ ಅಮಾನತು ರದ್ದು ಪಡಿಸಿ ರಾಜಾಧ್ಯಕ್ಷರಾಗಿ ಮುಂದುವರೆಯಲಿ ಎಂದರು.