ಕೊಪ್ಪಳ ನಗರದ ಜಿಲ್ಲಾ ಪಂಚಾಯತ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ- 2025 ರ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸೆಪ್ಟೆಂಬರ್ 12 ರಂದು ಮಧ್ಯಾಹ್ನ 12-00 ಗಂಟೆಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಮತ್ತು ತರಬೇತಿದಾರರು ಭಾಗಿಯಾಗಿದ್ದರು