ರೈತರ ಜೊತೆ ಅನುಚಿತವಾಗಿ ವರ್ತಿಸಿದ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.ನಂತರ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು.