ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಮಧ್ಯಮ ವರ್ಗದವರ ಏಳಿಗೆಗಾಗಿ ಜಿಎಸ್‌ಟಿ ದರದಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಇದರಿಂದಾಗಿ ಮಧ್ಯಮವರ್ಗದವರು ನಿಟ್ಟುಸಿರು ಬಿಟ್ಟಿದ್ದಾರೆ. ಕೇವಲ ಶೇ. 5% ಜಿಎಸ್ ಟಿ ಮತ್ತು ಶೇ. 18% ರಷ್ಟು ತೆರಿಗೆ ಜಾರಿಗೆ ತಂದಿದ್ದು ಸ್ವಾಗತವಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಾಧ್ಯವಾಗುತ್ತದೆ ಅಂತ ಗದಗ-ಬೆಟಗೇರಿ ಶಹರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ ತಿಳಿಸಿದರು.