ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪ್ಪಾರ ಯುವಕ ಸಂಘದ ಅಧ್ಯಕ್ಷ ಜಯಕುಮಾರ್ ಮಾತನಾಡಿ ಆ.31 ರಂದು ನಂಜನಗೂಡು ಪಟ್ಟಣದಲ್ಲಿ ಶ್ರೀ ಭಗೀರಥ ಜಯಂತಿ ಹಾಗೂ ಭಗೀರಥ ಭವನಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಶ್ರೀ ಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಹಾಗೂ ಚಾಮರಾಜನಗರ ರಸ್ತೆಯಲ್ಲಿ ಭಗೀರಥ ಭವನ ಶಂಕುಸ್ಥಾಪನೆ ನಡೆಯಲಿದೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸುವರು ಎಂದು ತಿಳಿಸಿದರು