ಮಂಡ್ಯ : ಶಿಕ್ಷಕರ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 5 ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಿಂದ ಆಯ್ದ ಜಿಲ್ಲೆಯ 24 ಮಂದಿ ಅತ್ಯುತ್ತಮ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಶುಕ್ರವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂಬಂಧ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸೆಪ್ಟೆಂಬರ್ 5 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಶಿಕ್ಷಕರ ದಿನಾಚರಣೆ ಆಚರಿಸಲಾ ಗುವುದು ಎಂದು ಹೇಳಿದರು.