ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋಪಿಶೆಟ್ಟಿ ಕೊಪ್ಪ ಹಾಗೂ ಗೋವಿಂದಾಪುರದಲ್ಲಿ ನಡೆಯುತ್ತಿರುವ ಆಶ್ರಯ ಯೋಜನೆಯ ಕಾಮಗಾರಿ ಸ್ಥಳಕ್ಕೆ ಬೆಂಗಳೂರಿನ ರಾಜೀವ್ ಗಾಂಧಿ ವಸತಿ ನಿಗಮಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಮುಂಬರುವ ಡಿಸೆಂಬರ್ ಒಳಗಾಗಿ ಗೋಪಿ ಶೆಟ್ಟಿ ಕೊಪ್ಪ ಹಾಗೂ ಗೋವಿಂದಾಪುರ ಯೋಜನೆಗಳ ತಲಾ 600 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಗುತ್ತಿಗೆದಾರರಿಗೆ ಖಡಕ್ ಸೂಚನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ,ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು.