ರಟ್ನಾಡಿ ಗ್ರಾಮದ ಮಕ್ಕಿಮನೆಯ ಕೃಷ್ಣ ಶೆಡ್ತಿ ಎಂಬವರ ಮಗ ಸತೀಶ್ ಶೆಟ್ಟಿ(35) ಎಂಬವರು ಆ.26ರಂದು ಮಧ್ಯಾಹ್ನ ವೇಳೆ ಮನೆಯ ಕೋಣೆಯಲ್ಲಿನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ಕಾರಣದಿಂದ ಮನನೊಂದ ಮೂಡುತೋನ್ಸೆ ಗ್ರಾಮದ ನವೀನ(44) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆ.25ರಂದು ಮಧ್ಯಾಹ್ನ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.