ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗಿಲ್ಲ ಎಂದು ಹೋರಾಟಗಾರ ಪಾವಗಡ ಶ್ರೀರಾಮ್ ಆರೋಪಿಸಿದರು.ಅವರು ತುಮಕೂರು ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.ಒಳ ಮೀಸಲಾತಿ ಜಾರಿ ಬೆನ್ನಲ್ಲೇ ಸರ್ಕಾರ ಶಾಶ್ವತ ಆಯೋಗ ರಚನೆ ಮಾಡುವುದಾಗಿ ಹೇಳಿತ್ತು. ಆಯೋಗದಲ್ಲಿ ಎಸ್ಸಿ ಎಸ್ಟಿ ಜನಾಂಗದವರೇ ಇರಬೇಕು ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುವುದಿಲ್ಲ ಎಂದರು.ಒಳ ಮೀಸಲಾತಿ ಜಾರಿ ವೇಳೆ ಜನಾಂಗದವರಿಗೆ ಸರ್ಕಾರದಿಂದ ಅನ್ಯಾಯವಾಗಿದೆ ಎಂದರು.