ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕಸ್ಥಿತಿಗತಿಗಳ ಸಮೀಕ್ಷೆ :ವ್ಯವಸ್ಥಿತ ಹಾಗೂ ನಿಖರ ಸಮೀಕ್ಷೆ ನಡೆಸಲು ಸಜ್ಜಾಗಿ: ನಗರದಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟಂಬರ್ ೨೦ ರಿಂದ ಅಕ್ಟೋಬರ್ ೭ ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.