ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿಯನ್ನ ಬ್ರಹ್ಮಾವರ ಪೊಲೀಸರು ಇಂದು ಬಂಧಿಸಿದ್ದಾರೆ. ನಂತರ ಬ್ರಹ್ಮಾವರ ತಾಲ್ಲೂಕು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಅವರ ಜಾಮೀನು ಅರ್ಜಿ ತಿರಸ್ಕತಗೊಂಡಿದೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಗಸ್ಟ್ 23ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.