ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೆದ್ದಾರಿಯ ದೇವರ ಹೊಸಳ್ಳಿ ಗ್ರಾಮದ ಬಳಿ ಮಂಗಳವಾರ ಅಪಘಾತ ನಡೆದಿದೆ. ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಬಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.