ತಲೆ ಹಾಗೂ ಮುಖದ ಮೇಲೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರಶುಕ್ರವಾರ ಬೆಳಿಗ್ಗೆ10ಗಂಟೆಗೆ ನಡೆದಿದೆ. ನಗರದ ರೂಪನಗುಡಿ ರಸ್ತೆ ಬಳಿಯ ಹಳೆಯ ರೈಸ್ ಮಿಲ್ ಮುಂದೆ ಕೊಲೆ ನಡೆದಿದೆ. ಕೊಲೆಗೀಡಾದ ವ್ಯಕ್ತಿ ಅಪರಿಚಿತನಾಗಿದ್ದು, ಶವದ ಬಳಿ ರಕ್ತಸಿಕ್ತವಾದ ಕಲ್ಲು ದೊರೆತಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಎಪಿಎಂ ಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಈ ಕುರಿತುನಗರದಎಪಿಎಂ ಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ