ವೈಜ್ಞಾನಿಕ ಒಳ ಮೀಸಲಾತಿ ಜಾರಿಗೆ ತರುವುದನ್ನ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲೆಯ ಬಂಜಾರ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆಯನ್ನು ನಡೆಸಲಾಯಿತು. ಮೀಸಲಾತಿಯನ್ನು ವರ್ಗೀಕರಣ ರೂಪದಲ್ಲಿ ನೀಡದೆ.ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.