ಯಲ್ಲಾಪುರ: ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಹದಿನಾಲ್ಕು ವರ್ಷದೊಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಕಿರವತ್ತಿ ಪಬ್ಲಿಕ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ದೀಕ್ಷಿತ ದೇವಿದಾಸ ಕೈಟಕರ್ 200 ಮೀಟರ್ ಓಟದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು ಶಾಲಾ ಮುಖ್ಯಾಧ್ಯಾಪಕರು ಶಿಕ್ಷಕರು ಹರ್ಷ ವ್ಯಕ್ತ ಪಡಿಸಿದ್ದಾರೆ.