ಆರೋಪಿತನಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಾರಿಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಉಜಿರೆಯ ನಿವಾಸಿಗಳಾದ ಸೃಜನ್ ಎಲ್, ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ತಿಳಿದುಬಂದಿದೆ.