ಗುಂಡ್ಲುಪೇಟೆ:ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ನಿರ್ಲಕ್ಷ್ಯ ಮುಂದುವರೆದರೆ,ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ರೈತ ಸಂಘಟನೆಯ ಅಧ್ಯಕ್ಷ ಹೂನ್ನೂರು ಪ್ರಕಾಶ್ ಎಚ್ಚರಿಸಿದರು. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಶುಕ್ರವಾರದಂದು ನೆಡೆದರೈತರ ಸಭೆಯಲ್ಲಿ ಅವರು ಮಾತನಾಡಿಬೋನಿಗೆ ಅರಣ್ಯ ಅಧಿಕಾರಿಗಳನ್ನು ಕೂಡಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ರೈತರ ಮೇಲೆ ಪ್ರಕರಣಗಳು ದಾಖಲಾಗಿದೆ.ಅರಣ್ಯದಿಂದ ಕಾಡು ಪ್ರಾಣಿಗಳು ಕಾಡಂಚಿನ ಗ್ರಾಮಗಳಲ್ಲಿನ ರೈತರ ಜಮೀನಿಗೆ ಲಗ್ಗೆ ಇಡುತ್ತಿವೆ. ಆದರೂ ಅರಣ್ಯಾಧಾರಿಗಳು ಪ್ರಾಣಿಗಳನ್ನು ಸೆರೆಹಿಡಿಯುವಲ್ಲಿ ವಿಫಲವಾಗಿದ್ದು ಇದರ ಪರಿಣಾಮವಾಗಿ ರೈತರು ತಮ್ಮ ಜಮೀನಿಗೆ ಹೋಗಲು ಭಯಭೀತರಾಗಿದ್ದಾರೆ ಎಂದರು