ಬೀದರ್: ಆನಂದ ಹಾಗೂ ಸ್ವಾಸ್ಥ್ಯಕ್ಕಾಗಿ ಎಲ್ಲರೂ ಆಟ ಆಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ವತಿಯಿಂದ ಇಲ್ಲಿಯ ಎನ್.ಎಫ್. ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀದರ್ ತಾಲ್ಲೂಕುಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.