ಹನೂರು: ಧರ್ಮಸ್ಥಳದಲ್ಲಿ ನಡೆದ ಇತ್ತೀಚಿನ ಘಟನೆಯ ಕುರಿತು ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಿ, ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಸೇರಿದಂತೆವ ರಾಜ್ಯ. ವಿವಿಧ ಮಠಾಧೀಶರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಪ್ರಕರಣವನ್ನು ರಾಷ್ಟ್ರೀಯ ತನಿಖಾದಳಗೆ ವಹಿಸಲು ಮನವಿ ಮಾಡಿದ್ದಾರೆ. ಈ ವೇಳೆ ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ, ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮಂಗಳೂರು ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಎಂಟು ಮಂದಿ ಶ್ರೀಗಳು ಇದ್ದರು.