ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಬಳಿಯಲ್ಲಿ ಅಕ್ರಮ ಮುರಂ ಗಣಿಗಾರಿಕೆಗೆ ಸಹಕಾರ ನೀಡಿದ ಆರೋಪದಲ್ಲಿ ಶಹಾಪುರದ ಕಂದಾಯ ನಿರೀಕ್ಷಕ ಮಹೇಂದ್ರ ಸ್ವಾಮಿ ಹಾಗೂ ಗ್ರಾಮ ಆಡಳಿತ ಅಧಿಕಾರಿ ದೇವೇಂದ್ರಪ್ಪ ಅವರನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಂದಾಯ ನಿರೀಕ್ಷಕ ಲಂಚ ಸ್ವೀಕಾರದ ಕುರಿತು ಮಾತನಾಡಿದ್ದಾರೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದರ ಕುರಿತು ಸೋಮವಾರ ಸಾಯಂಕಾಲ ಜಿಲ್ಲಾಧಿಕಾರಿಗಳು ಇಬ್ಬರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.